ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಜಪ್ತಿ
ಶಿವಮೊಗ್ಗ, ಅ.23: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ಅವರ ತಂಡವು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ಕೃಷ್ಣಮೂರ್ತಿ ಡಿವೈಎಸ್.ಪಿ ಭದ್ರಾವತಿ ಅವರ ಮಾರ್ಗದರ್ಶನದಲ್ಲಿ, ಭದ್ರಾವತಿ ಗ್ರಾಮಾಂತರ ವೃತ್ತ ಪೊಲೀಸ್ ನಿರೀಕ್ಷಕ ಮಂಜುನಾಥ್, ಹೊಳೆಹೊನ್ನೂರು ಪೊಲೀಸ್ ಠಾಣೆ ಪಿಎಸ್ಐ ಸುರೇಶ್, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ದೇವರಾಜ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿತರಾದ ಶಶಿ ಕುಮಾರ್ ಹಾಗೂ ರವಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಒಟ್ಟು 56 ಗ್ರಾಂ ತೂಕದ ಬಂಗಾರದ ಆಭರಣಗಳು, ಅಂದಾಜು ಮೌಲ್ಯ ರೂ 2.30 ಲಕ್ಷ ಮತ್ತು 140 ಗ್ರಾಂ ತೂಕದ ಬೆಳ್ಳಿ ಆಭರಣಗಳು ಅಂದಾಜು ಮೌಲ್ಯ ರೂ. 2 ಸಾವಿರ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶ ಪಡಿಸಿಕೊಳ್ಳಲಾಗಿದೆ ಎಂದು ಎಸ್.ಪಿ. ಕೆ.ಎಂ ಶಾಂತರಾಜು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.