ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದು ಕೈದಿ ಆತ್ಮಹತ್ಯೆ
ಶಿವಮೊಗ್ಗ : ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ನಡೆದಿದೆ.
ಸಾಗರ ನಿವಾಸಿ ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡ ಕೈದಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆಯ ಸುಮಾರಿಗೆ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಜೈಲು ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
Next Story