ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಬಿಜೆಪಿಯಿಂದ ಉಚ್ಚಾಟನೆ
ಬೆಂಗಳೂರು, ಅ.24: ಬಿಜೆಪಿ ಪಕ್ಷದ ಸೂಚನೆಯನ್ನು ಮೀರಿ ವಿಧಾನಪರಿಷತ್ನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಸೂಚಿಸಲಾಗಿದ್ದರೂ ಡಿ.ಟಿ.ಶ್ರೀನಿವಾಸ್ ಕಡೆಗಣಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ತಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಡಿ.ಟಿ.ಶ್ರೀನಿವಾಸ್ ಹಿನ್ನೆಲೆ: ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿಯಾಗಿರುವ ಡಿ.ಟಿ.ಶ್ರೀನಿವಾಸ್, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಪ್ರಚಾರ ಕೈಗೊಂಡಿದ್ದೇನೆ. ಹಿಂದುಳಿದ ಸಮುದಾಯದ ಬೆಂಬಲ ನನಗಿದೆ. ಆದರೂ ಬಿಜೆಪಿಯಿಂದ ಟಿಕೆಟ್ ವಂಚಿತನಾದೆ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಯಿತು ಎಂದು ಅಭಿಪ್ರಾಯಿಸಿದ್ದಾರೆ.