Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡ್ರಗ್ಸ್ ಜಾಲ ಪ್ರಕರಣ: ಬಿನೀಶ್...

ಡ್ರಗ್ಸ್ ಜಾಲ ಪ್ರಕರಣ: ಬಿನೀಶ್ ಕೊಡಿಯೇರಿಯನ್ನು ಮತ್ತೆ 5 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 Nov 2020 10:00 PM IST
share

ಬೆಂಗಳೂರು, ನ.2: ಡ್ರಗ್ಸ್ ಜಾಲದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಮೊಹಮ್ಮದ್ ಅನೂಪ್ ಜತೆ ಹಣಕಾಸು ವ್ಯವಹಾರ ನಡೆಸಿರುವ ಆರೋಪದಡಿ ಬಂಧಿತನಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ ಪುತ್ರ ಬಿನೀಶ್ ಕೊಡಿಯೇರಿಯನ್ನು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಇಡಿ ಅಧಿಕಾರಿಗಳು ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಜಾರಿ ನಿರ್ದೇಶನಾಲಯ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಇಡಿ ಪರ ವಾದಿಸಿದ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರು, ಆರೋಪಿ ಬಿನೀಶ್ ಕೊಡಿಯೇರಿ ಅಕ್ರಮದಲ್ಲಿ ಭಾಗಿಯಾಗಿರುವ ಕುರಿತು ಮತ್ತಷ್ಟು ತನಿಖೆ ನಡೆಸುವ ಅಗತ್ಯವಿದೆ. ಆದರೆ, ಆರೋಪಿ ಅನಾರೋಗ್ಯದ ಕಾರಣ ಒಡ್ಡಿ ತನಿಖೆಗೆ ಸರಿಯಾಗಿ ಸಹಕರಿಸಿಲ್ಲ. ಹೀಗಾಗಿ ಮತ್ತಷ್ಟು ದಿನಗಳ ಕಾಲ ಇಡಿ ವಶಕ್ಕೆ ನೀಡಬೇಕು ಎಂದು ಕೋರಿದರು. 

ಅಲ್ಲದೇ, ಆರೋಪಿ ಬಿನೀಶ್ ಕೊಡಿಯೇರಿ ವಿರುದ್ಧ ಕೇರಳದಲ್ಲೇ 10 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ದುಬೈನಲ್ಲಿ ಸಹ ಈತನ ವಿರುದ್ಧ ಪ್ರಕರಣ ದಾಖಲಾಗಿದೆ. 3.5 ಕೋಟಿ ರೂಪಾಯಿ ಹಣವನ್ನು ಹವಾಲ ಮೂಲಕ ಸಾಗಿಸಿರುವ ಮಾಹಿತಿ ಇದೆ. ಅದಕ್ಕಾಗಿ ಎರಡು ಬೇನಾಮಿ ಸಂಸ್ಥೆಗಳನ್ನು ಸ್ಥಾಪಿಸಿದ್ದಾನೆ ಎನ್ನಲಾಗಿದೆ. ಇಷ್ಟಲ್ಲದೇ ಬಿನೀಶ್ ತನ್ನೊಂದಿಗೆ ಮಾದಕ ವಸ್ತು ಸೇವಿಸಿರುವ ಕುರಿತು ಡ್ರಗ್ಸ್ ಜಾಲದ ಪ್ರಮುಖ ಆರೋಪಿ ಅನೂಪ್ ಹೇಳಿಕೆ ನೀಡಿದ್ದಾನೆ. ಕೇರಳ ಮಾಜಿ ಗೃಹ ಸಚಿವರ ಪುತ್ರನಾಗಿರುವ ಈತ ಸಾಕಷ್ಟು ಪ್ರಭಾವಿಯಾಗಿದ್ದು, ಮತ್ತಷ್ಟು ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ ಇಡಿ ವಶಕ್ಕೆ ನೀಡಬೇಕು ಎಂದು ಪ್ರಸನ್ನ ಕುಮಾರ್ ಕೋರಿದರು. 

ಇದಕ್ಕೆ ಆರೋಪಿ ಪರ ವಾದಿಸಿದ ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿರುವ ಅಗತ್ಯವಿದೆ ಎಂಬ ಇಡಿ ಪರ ವಕೀಲರ ವಾದ ಪುರಸ್ಕರಿಸಿದ ನ್ಯಾಯಾಲಯ ಮತ್ತೆ 5 ದಿನಗಳ ಕಾಲ ನವೆಂಬರ್ 7ರವರೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ಟೋಬರ್ 29 ರಂದು ಬಿನೀಶ್ ಕೊಡಿಯೇರಿ ಅವರನ್ನು ಬಂಧಿಸಲಾಗಿತ್ತು. ನಂತರ ನವೆಂಬರ್ 2ರವರೆಗೂ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X