ಸ್ಮರ್ಧಾತ್ಮಕ ಪರೀಕ್ಷೆಗೆ ಕೆಪಿಎಸ್ಸಿ ವೇಳಾಪಟ್ಟಿ ಪ್ರಕಟ
ಬೆಂಗಳೂರು, ನ.8: ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಹಾಗೂ ಇತರೆ ಹಲವು ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ `ಎ' ವೃಂದದ ಸಹಾಯಕ ನಿಯಂತ್ರಕರ ಹುದ್ದೆಗಳ ಪರೀಕ್ಷೆ ಡಿ.21ರಿಂದ 24, ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ' ಮತ್ತು `ಬಿ' ವೃಂದದ ಹುದ್ದೆಗಳಿಗೆ ಜ.1ರಿಂದ 5ರ ವರೆಗೆ ನಡೆಯಲಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ, ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳು ಕನ್ನಡ ಭಾಷಾ ಪರೀಕ್ಷೆ ಜ.23ರಿಂದ ನಡೆಯಲಿದೆ. ಹಾಗೂ ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ `ಎ' ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಹುದ್ದೆಗಳ ಪರೀಕ್ಷೆ ಜ.27ರಿಂದ 30ರವರೆಗೆ ನಡೆಯಲಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಫೆ.13 ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಫೆ.14ರಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.