ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಅವರ ಪತ್ನಿಗೆ ಕೊರೋನ ಪಾಸಿಟಿವ್
ಆಸ್ಪತ್ರೆಗೆ ದಾಖಲು
ಟಿ.ಬಿ.ಜಯಚಂದ್ರ
ಬೆಂಗಳೂರು, ನ. 9: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತವರ ಪತ್ನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗೊತ್ತಾಗಿದೆ.
ಸೋಮವಾರ ಸಂಜೆ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ಜಯಚಂದ್ರ ದಂಪತಿಗೆ ಸೋಂಕಿನ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಸೋಂಕು ದೃಢಪಟ್ಟಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಲು ಅವರು ಕೋರಿದ್ದಾರೆ.
ನಾಳೆ(ನ.10) ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯವು ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.
Next Story