ಮತದಾರರ ತೀರ್ಪಿಗೆ ತಲೆಬಾಗಲೇಬೇಕಿದೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂಸದ ಡಿ.ಕೆ.ಸುರೇಶ್
ಬೆಂಗಳೂರು, ನ.10: ಮೊದಲಿಗೆ ಆರ್.ಆರ್. ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ ಎಂದು ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.
ಈ ಫಲಿತಾಂಶವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೊಡ್ಡ ಮಟ್ಟದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಪಕ್ಷ ಸಂಘಟನೆಯ ಎಲ್ಲಾ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ. ಉಪಚುನಾವಣೆಗೆ ಸಹಕರಿಸಿದ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದ್ದಾರೆ
Next Story