ಡಿ.1ರಿಂದ ವೈದ್ಯಕೀಯ ಕಾಲೇಜುಗಳು ಆರಂಭ: ಡಾ.ಕೆ.ಸುಧಾಕರ್
ಬೆಂಗಳೂರು, ನ.13: ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
Next Story