ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಓರ್ವ ಪೊಲೀಸ್ ಸೇರಿ 7 ನಕಲಿ ಅಭ್ಯರ್ಥಿಗಳ ಬಂಧನ
ಬೆಂಗಳೂರು, ನ.22: ರಾಜ್ಯದ ವಿವಿಧೆಡೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ರವಿವಾರ ನಡೆದ ಪ್ರವೇಶಾತಿ ಪರೀಕ್ಷೆಯಲ್ಲಿ ಕೆಲವೆಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದ್ದು, ತಪಾಸಣೆ ವೇಳೆ 7 ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.
ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್, ಪಶ್ಚಿಮ ವಿಭಾಗದಲ್ಲಿ ಇಬ್ಬರು, ದಕ್ಷಿಣ ವಿಭಾಗದಲ್ಲಿ ಒಬ್ಬರು, ಪೂರ್ವ ವಿಭಾಗದಲ್ಲಿ ಮೂವರು ಸೇರಿದಂತೆ ಒಟ್ಟು 7 ಮಂದಿ ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.
ರಾಜ್ಯದಲ್ಲಿ 17,940 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗಿರುವುದು ತಪಾಸಣೆಯ ವೇಳೆ ಬೆಳಕಿಗೆ ಬಂದಿದೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Next Story