ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮನ್ಸೂರ್ ಖಾನ್ ಐದು ದಿನಗಳ ಕಾಲ ಸಿಬಿಐ ವಶಕ್ಕೆ
ಬೆಂಗಳೂರು, ನ.23: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥೆಯ ಮುಖ್ಯಸ್ಥ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಸಿಬಿಐ ವಿಶೇಷ ಕೋರ್ಟ್ ಐದು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.
ಆರೋಪಿ ಮನ್ಸೂರ್ ಖಾನ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಐದು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.
ಐಎಂಎ ಸಂಸ್ಥೆಯ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳು ರವಿವಾರ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದರು. ಹಾಗೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು ಒಟ್ಟಿಗೆ ವಿಚಾರಣೆ ನಡೆಸುವ ಉದ್ದೇಶದಿಂದಾಗಿ ಸಿಬಿಐ ಅಧಿಕಾರಿಗಳು ಮನ್ಸೂರ್ ಖಾನ್ನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Next Story