ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಆರ್.ವಿಶ್ವನಾಥ್ ರಾಜೀನಾಮೆ
ಬೆಂಗಳೂರು, ನ. 26: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಯಲಹಂಕ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಸಂಬಂಧ ಪತ್ರವೊಂದನ್ನು ಬರೆದಿರುವ ಎಸ್.ಆರ್.ವಿಶ್ವನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವೆ ಎಂದು ಅವರು ತಿಳಿಸಿದ್ದಾರೆ.
‘ನನಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬೆಂಗಳೂರು ನಾಗರಿಕರಿಗೆ ಸೇವೆ ಸಲ್ಲಿಸಲು ಜವಾಬ್ದಾರಿಯನ್ನು ನೀಡಿರುವ ಹಿನ್ನೆಲೆ ನಾನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿರುತ್ತೇನೆ’ ಎಂದು ವಿಶ್ವನಾಥ್ ಪತ್ರದಲ್ಲಿ ತಿಳಿಸಿದ್ದಾರೆ.
Next Story