ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರ ಸೇವೆ 2020-21ನೇ ಸಾಲಿಗೂ ಮುಂದುವರಿಕೆ
ಬೆಂಗಳೂರು, ನ.28: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕೋವಿಡ್-19ರ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿಗೂ ಮುಂದುವರಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ್ ನಿರ್ದೇಶಿಸಿದ್ದಾರೆ.
ಈ ಕುರಿತು ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಸಚಿವರಿಗೆ ಪತ್ರ ಬರೆದಿರುವ ಅವರು, 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಒಂದು ದಿನದ ಮಟ್ಟಿಗೆ ಬಿಡಗುಡೆಗೊಳಿಸಿ, 2020-21ನೇ ಶೈಕ್ಷಣಿಕ ಸಾಲಿಗೂ ಇವರ ಸೇವೆಯನ್ನು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ನಿಯಮಾನುಸಾರ ಮುಂದುವರಿಸಬೇಕೆಂದು ತಿಳಿಸಿದ್ದಾರೆ.
Next Story