--

‘ಪ್ರೌಢಶಾಲಾ ಸಂವೇದಾ ತರಗತಿ’ ಸಮಯ ಬದಲು: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಡಿ.5: ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ದೂರದರ್ಶನ ಚಂದನಾ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮದ ಸಮಯಗಳಲ್ಲಿ ಡಿಸೆಂಬರ್ 7 ರಿಂದ ಸ್ವಲ್ಪ ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು ಈ ಬದಲಾವಣೆಯನ್ನು ಗಮನಿಸಿ ತರಗತಿಗಳ ಸದುಪಯೋಪಡಿಸಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್-19 ಪ್ರಸರಣದ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ಆಗಸ್ಟ್ ನಿಂದಲೇ 8, 9, 10ನೇ ತರಗತಿಗಳಿಗೆ ಸಂವೇದಾ ಪಾಠಗಳು ನಡೆಯುತ್ತಿವೆ. ಪ್ರಸ್ತುತ ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ತರಗತಿಗಳ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ-ಡಿ.ಎಸ್.ಇ.ಆರ್.ಟಿ ಬಿಡುಗಡೆ ಮಾಡಿದೆ. ತರಗತಿಗಳು ಬೆಳಗ್ಗೆ 7 ರಿಂದ 10.30 ರವರೆಗೆ ಮತ್ತು ಸಂಜೆ 5 ರಿಂದ 6.30 ರವರೆಗೆ ಪ್ರಸಾರವಾಗಲಿವೆ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕನ್ನಡ, ಇಂಗ್ಲಿಷ್ (ಪ್ರಥಮ ಮತ್ತು ದ್ವಿತೀಯ), ಗಣಿತ, ವಿಜ್ಞಾನ, ಸಮಾಜ, ಸಂಸ್ಕೃತ ಪ್ರಥಮ, ಹಿಂದಿ ತೃತೀಯ, ಉರ್ದು ಪ್ರಥಮ ಭಾಷೆ ತರಗತಿಗಳು ಪ್ರಸಾರವಾಗುತ್ತಿವೆ. ಡಿ.7 ರಿಂದ 13 ರವರೆಗೆ ಪ್ರಸಾರವಾಗುವ ವಿಷಯವಾರು ತರತಿಗಳ ವೇಳಾಪಟ್ಟಿಯನ್ನು ಡಿ.ಎಸ್.ಇ.ಆರ್.ಟಿ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಈ ತರಗತಿಗಳು ಬದಲಾದ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಶಿಕ್ಷಕರು ಕಾರ್ಯಕ್ರಮದ ಅನುಪಾಲನೆ ಮಾಡಲಿದ್ದಾರೆ. ಈ ಪಾಠಗಳ ಕುರಿತಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕರು ಮಕ್ಕಳಿಗೆ ತಲುಪುವಂತೆ ಹೆಚ್ಚಿನ ರೀತಿಯ ಪ್ರಚಾರ ಮಾಡಿ ಮಕ್ಕಳು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top