ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೋಲಾರ, ಡಿ.7: ಮುಂಬರುವ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿನಾಗುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.
ನಗರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ ಎಂದರು.
ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ. ಆದರೆ ತಾನು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದರು.
Next Story