ಹಿರಿಯ ಕಲಾವಿದ ಶನಿ ಮಹಾದೇವಪ್ಪ ನಿಧನ
ಬೆಂಗಳೂರು, ಜ.3: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ(90) ರವಿವಾರ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಮೂಲದ ಶನಿ ಮಹಾದೇವಪ್ಪ ಅವರು ಅನಾರೋಗ್ಯ ಹಿನ್ನೆಲೆ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ರವಿವಾರ
ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕವಿರತ್ನ ಕಾಳಿದಾಸ ಸಿನಿಮಾದ ಡಿಂಡಿಮ ಕವಿ ಪಾತ್ರದಲ್ಲಿ ಅಭಿನಯಿಸಿದ್ದ ಶನಿ ಮಹಾದೇವಪ್ಪ ಅವರು ಅದೇ ಹೆಸರಿನಲ್ಲಿ ಜನಪ್ರಿಯರಾಗಿದ್ದರು.
ಇನ್ನು, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣದಂತಹ ಪ್ರಮುಖ ಚಿತ್ರಗಳು ಸೇರಿದಂತೆ ವರನಟ ಡಾ.ರಾಜ್ ಕುಮಾರ್ ಅವರ ಜೊತೆಯಲ್ಲಿ 150ಕ್ಕೂಹೆಚ್ಚು ಚಿತ್ರಗಳಲ್ಲಿ ಶನಿಮಹಾದೇವಪ್ಪ ನಟಿಸಿದ್ದರು. ಒಟ್ಟಾರೆ ತಮ್ಮ ಸಿನಿಮಾ ಪಯಣದಲ್ಲಿ 550ಕ್ಕೂಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
Next Story