ಮಾರಕಾಸ್ತ್ರಗಳಿಂದ ಕೊಚ್ಚಿ ಸಹೋದರರಿಬ್ಬರ ಹತ್ಯೆ
ಕಲಬುರಗಿ : ಹಳೆ ವೈಷಮ್ಯದ ಹಿನ್ನೆಯಲ್ಲಿ ಇಬ್ಬರು ಸಹೋದರರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.
ತಡಕಲ್ ಗ್ರಾಮದ ನಿವಾಸಿಗಳಾದ ನಿಲೇಶ್ (39), ರಾಜಶೇಖರ (35) ಮೃತರು ಎಂದು ಗುರುತಿಸಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದ್ದು, ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ.
ಸದ್ಯ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story