‘ಆಪರೇಷನ್ ಕಮಲ'ಕ್ಕೆ ಯೋಗೇಶ್ವರ್ ಹಣ: ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ತನಿಖೆಗೆ ಸಿದ್ದರಾಮಯ್ಯ ಆಗ್ರಹ | Vartha Bharati- ವಾರ್ತಾ ಭಾರತಿ

--

''ಸಿಡಿಯಲ್ಲಿ ಏನಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಾಗಬೇಕು''

‘ಆಪರೇಷನ್ ಕಮಲ'ಕ್ಕೆ ಯೋಗೇಶ್ವರ್ ಹಣ: ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜ. 16: ರಾಜ್ಯ ಸರಕಾರ ರಚನೆಗೆ ನೆರವಾಗಲು ಸಿ.ಪಿ.ಯೋಗೇಶ್ವರ್ ಅವರು 9 ಕೋಟಿ ರೂ.ಸಾಲ ಮಾಡಿದ್ದರು ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಹೈಕೋರ್ಟಿನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ ಎಂಬುದು ಜಾರಕಿಹೊಳಿಯವರ ಹೇಳಿಕೆಯಿಂದ ಸಾಬೀತಾಗಿದೆ. ಹೀಗಾಗಿ ಅವರ ಹೇಳಿಕೆ ಕುರಿತು ನಿಖರ ಮತ್ತು ಸಮಗ್ರವಾದ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

‘ಆಪರೇಷನ್ ಕಮಲ' ಎಂದರೆ ಹಣ ನೀಡಿ ಶಾಸಕರನ್ನು ಖರೀದಿ ಮಾಡುವುದು ಎಂದು ಅರ್ಥ. ಈಗ ರಮೇಶ್ ಜಾರಕಿಹೊಳಿಯವರೇ ಹಣದ ವ್ಯವಹಾರ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಸಿ.ಪಿ.ಯೋಗೇಶ್ವರ್ 9 ಕೋಟಿ ರೂ.ಸಾಲ ಮಾಡಿ ಸರಕಾರ ರಚನೆಗೆ ನೆರವಾಗಿದ್ದಾರೆಂದು ಅವರು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರು ಟೀಕಿಸಿದರು.

ನಾವು ಸಜ್ಜನರು, ಆಪರೇಷನ್ ಕಮಲಕ್ಕೆ ಹಣ ಖರ್ಚು ಮಾಡಿಲ್ಲ. 17 ಶಾಸಕರು ಅವರಾಗಿಯೇ ಬಂದಿದ್ದಾರೆಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯವರು ಎಂತಹ ನೀಚರು, ಸುಳ್ಳುಗಾರರು ಎಂಬುದು ತನಿಖೆ ಮೂಲಕ ರಾಜ್ಯದ ಜನರಿಗೆ ತಿಳಿಯಲಿ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಯಡಿಯೂರಪ್ಪ ಆಪರೇಷನ್ ಕಮಲದ ಜನಕ. ಅವರು ರಾಜ್ಯದ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವರಲ್ಲ. ಹಣ ಮತ್ತು ಆಪರೇಷನ್ ಕಮಲದ ಮೂಲಕ ಅವರು ಸಿಎಂ ಆಗಿದ್ದಾರೆಂದು ಟೀಕಿಸಿದ ಸಿದ್ದರಾಮಯ್ಯ, 9 ಕೋಟಿ ರೂ.ಗಳು ಬಂದಿದ್ದಾದರೂ ಎಲ್ಲಿಂದ. ಅದನ್ನು ಯೋಗೇಶ್ವರ್ ಅವರಿಗೆ ಕೊಟ್ಟವರು ಯಾರು. ಅದು ಬಿಳಿ ಹಣವೇ ಅಥವಾ ಕಪ್ಪು ಹಣವೇ ಎಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ನಾನು ಈ ರೀತಿಯ ಆರೋಪ ಮಾಡಿದ್ದರೆ ವಿರೋಧ ಪಕ್ಷದವರು ವಿನಾ ಕಾರಣ ಆರೋಪ ಮಾಡುತ್ತಿದ್ದಾರೆಂದು ಹೇಳುತ್ತಾರೆ. ರಮೇಶ್ ಜಾರಕಿಹೊಳಿ ಹಿರಿಯ ಸಚಿವರು. ಅವರೇ ಆರೋಪ ಮಾಡಿದ್ದಾರೆ. ಹೀಗಾಗಿ ತನಿಖೆ ಆಗಬೇಕಲ್ಲವೇ? ಎಂದ ಅವರು, ಇದು ದಾರಿಯಲ್ಲಿ ಹೋಗುವವರು ಹೇಳಿರುವ ಮಾತಲ್ಲ. ಜವಾಬ್ದಾರಿಯುತ ಸಚಿವರು ಹೇಳಿರುವ ಮಾತಿದು. ಹೀಗಾಗಿ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮನವಿ ಮಾಡಿದರು.

ಸಿ.ಡಿ. ಬಗ್ಗೆಯೂ ತನಿಖೆ ಆಗಲಿ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯ ನಾಯಕ. ಸಿ.ಡಿ. ಕುರಿತಾಗಿ ಅವರೇ ಆರೋಪ ಮಾಡಿದ್ದಾರೆ. ಸಿ.ಡಿ.ಯಲ್ಲಿ ಕೊಳಕು ದೃಶ್ಯಗಳಿವೆ. ನೋಡಲಾಗದು ಎಂದಿದ್ದಾರೆ. ಹೀಗಾಗಿ ಸಿ.ಡಿ.ಯಲ್ಲಿ ಏನಿದೆ ಎಂಬುದೂ ರಾಜ್ಯದ ಜನರಿಗೆ ಗೊತ್ತಾಗಬೇಕಲ್ಲವೇ? ಹೀಗಾಗಿ ತನಿಖೆ ನಡೆಸುವುದು ಸೂಕ್ತ. ಯಡಿಯೂರಪ್ಪ ಅವರಿಗೆ ಏಕೆ ಮತ್ತು ಹೇಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆಂಬ ಸತ್ಯಾಂಶವೂ ಹೊರಬರಬೇಕಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ತಮ್ಮ ಕ್ಷೇತ್ರಗಳಿಗೆ ಅನುದಾನ ಪಡೆಯಲು ಶಾಸಕರು ಅರ್ಹರು. ಅದರಲ್ಲಿ ಬ್ಲ್ಯಾಕ್‍ಮೇಲ್ ಮಾಡುವ ಅಗತ್ಯವೇನಿದೆ. ಅನುದಾನ ಕೋರಿ ಶಾಸಕ ಝಮೀರ್ ಅಹ್ಮದ್ ಖಾನ್ ಅವರು ಪತ್ರ ಕೊಟ್ಟಿದ್ದಾರೆ. ಆ ಪತ್ರದ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಸಣ್ಣ ಸಹಿ ಮಾಡಿ ಹಣಕಾಸು ಇಲಾಖೆಗೆ ಕಳುಹಿಸಿದ್ದಾರೆ. ಇಷ್ಟಕ್ಕೂ ಅನುದಾನ ಬಿಡುಗಡೆ ಆಗಿದೆಯೇ? ಅದು ಆದೇಶವೂ ಅಲ್ಲ ಎಂದು ಸ್ಪಷ್ಟನೆ ನೀಡಿದರು.

ಸರಕಾರ ಸತ್ತಿದೆ: ರಾಜ್ಯದಲ್ಲಿ ಸರಕಾರ ಸತ್ತಿದೆ. ಇನ್ನೂ ಏಳು ಸತ್ತಿರುವ ಕುದುರೆಗಳನ್ನು ಸಿಎಂ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಪಿಂಚಣಿ ಕೊಡಲು, ಮನೆ, ರಸ್ತೆ ಕಾಮಗಾರಿಗಳಿಗೆ ಅನುದಾನ ಇಲ್ಲ. ನೀರಾವರಿ ಯೋಜನೆಗಳು ನಿಂತಿವೆ. ವಿದ್ಯಾರ್ಥಿ ವೇತನ ಕೊಡುತ್ತಿಲ್ಲ. ಸರಕಾರ ಎಲ್ಲಿದೆ. ರಾಜ್ಯದಲ್ಲಿ ಸತ್ತ ಸರಕಾರವಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜ್ಯದ ಜನತೆ ಚುನಾವಣೆ ಬರಲಿ ಎಂದು ಕಾಯುತ್ತಿದ್ದಾರೆ. ಬಂದ ಕೂಡಲೇ ಈ ಸರಕಾರ ಮತ್ತು ಯಡಿಯೂರಪ್ಪ ಅವರನ್ನು ಜನ ಮನೆಗೆ ಕಳುಹಿಸಲಿದ್ದಾರೆ. ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜ.20ಕ್ಕೆ ಚಳವಳಿ ನಡೆಸಲಿದೆ. ಅಂದು ರಾಜಭವನ ಚಲೋ ನಡೆಯಲಿದೆ ಎಂದರು.

‘ಆಪರೇಷನ್ ಕಮಲ'ಕ್ಕೆ ಸಿ.ಪಿ.ಯೋಗೀಶ್ವರ್ ಕೋಟ್ಯಂತರ ರೂ.ಸಾಲ ಮಾಡಿದ್ದಾರೆಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕು'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಎಲ್ಲರಿಗೂ ಲಸಿಕೆ ಸಿಗಲಿ

‘ನಮಗೆ ಕೊರೋನ ನಿಯಂತ್ರಣ ಲಸಿಕೆ ಬೇಡ ಎಂದು ಹೇಳಿಲ್ಲ. ಕೊರೋನ ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯವರು ಪ್ರಮಾಣ ಪತ್ರ ನೀಡಿರುವುದರಿಂದ ಲಸಿಕೆ ಬಗ್ಗೆ ಅನುಮಾನ ಬೇಡ. ಎಲ್ಲರಿಗೂ ಲಸಿಕೆ ಸಿಗುವಂತಾಗಬೇಕು. ಇಲ್ಲದಿದ್ದರೆ ಕೋವಿಡ್ ನಿಯಂತ್ರಣ ಅಸಾಧ್ಯ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top