ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ: ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು, ಜ.16: ಎರಡು ದಿನಗಳ ಪ್ರವಾಸದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದರು.
ಇಂದು ಅಮಿತ್ ಶಾ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಯಡಿಯೂರಪ್ಪ ಅವರು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಅಮಿತ್ ಶಾ ಅವರು ಎರಡು ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ರಸ್ತೆ ಸಂಚಾರದಲ್ಲೂ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ.
Next Story