ಗ್ರಾಪಂ ನೂತನ ಸದಸ್ಯರ ತರಬೇತಿ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು, ಜ.16: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಗಳ ನೂತನ ಸದಸ್ಯರ ತರಬೇತಿ ಕಾರ್ಯಕ್ರಮಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ.
ಜ.18ರಿಂದ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಗ್ರಾಪಂ ನೂತನ ಸದಸ್ಯರ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ರಾಜ್ಯಾದ್ಯಂತ ನಡೆಯುತ್ತಿರುವುದರಿಂದ ನೂತನ ಸದಸ್ಯರ ತರಬೇತಿಗೆ ಅನಾನುಕೂಲವಾಗಬಾರದು ಎಂಬ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿ ಶಿಲ್ಪಾನಾಗ ಸುತ್ತೋಲೆ ಹೊರಡಿಸಿದ್ದಾರೆ.
Next Story