ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ: ವಿದೇಶಿ ಡ್ರಗ್ಸ್ ಪೆಡ್ಲರ್ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.18: ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ವಿದೇಶಿ ಡ್ರಗ್ಸ್ ಪೆಡ್ಲರ್ ನೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ವಿದೇಶಿ ಪ್ರಜೆ ಚಿಡಿಬೈರ್ ಆಯಮರೋಸ್ ಬಂಧಿತ ಆರೋಪಿಯಾಗಿದ್ದು, ಈತನಿಂದ 10 ಗ್ರಾಂಎಲ್ಎಸ್ಡಿ ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಈತನ ಬಂಧನದಿಂದ ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೇರಿದೆ. ಇನ್ನು, ಆರೋಪಿಯು ಪ್ರಮುಖ ಗಣ್ಯರಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
Next Story