ಫೆ.4ರಿಂದ ಸೇನಾ ನೇಮಕಾತಿ ರ್ಯಾಲಿ: ಅಗತ್ಯ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಸೂಚನೆ
ಬೆಳಗಾವಿ, ಜ.31: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮೈದಾನದಲ್ಲಿ ಫೆ.4ರಿಂದ 15ರ ವರೆಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ರವಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಜಿ.ಹಿರೇಮಠ, ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳ ಆರೋಗ್ಯ ತಪಾಸಣೆ, ಭದ್ರತೆ, ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆ ವತಿಯಿಂದ ಥರ್ಮಲ್ ಸ್ಕಾನರ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ಅಂಬುಲೆನ್ಸ್ ಸೌಲಭ್ಯ ನೀಡಬೇಕು ಮತ್ತು ರ್ಯಾಲಿ ನಡೆಯುವ ದಿನಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಿರಬೇಕು ಎಂದು ಹೇಳಿದರು. ಆಸಕ್ತ ಎನ್ಜಿಓ ಅವರ ವತಿಯಿಂದ ಅಭ್ಯರ್ಥಿಗಳಿಗೆ ಫುಡ್ ಪ್ಯಾಕೆಟ್ ನೀಡಲು ಮನವಿ ಮಾಡುವುದಾಗಿ ಅಧಿಕಾರಿಗಳಿಗೆ ಹೇಳಿದರು.
Next Story