ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಮುಂದೂಡಲಾಗಿದ್ದ ಎಫ್ಡಿಎ ಪರೀಕ್ಷೆ ಫೆ.28ಕ್ಕೆ ನಿಗದಿ
ಬೆಂಗಳೂರು, ಫೆ.2: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಫೆ.28ಕ್ಕೆ ನಿಗದಿ ಪಡಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಲೋಕಸೇವಾ ಆಯೋಗವು, ಈ ಹಿಂದೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ಜ.24ರಂದು ನಡೆಸಬೇಕಿತ್ತು. ಆದರೆ, ಕೊನೆಯ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಯಿತು. ಇದೇ ಪರೀಕ್ಷೆ ಫೆ.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಸತ್ಯವತಿ ತಿಳಿಸಿದ್ದಾರೆ.
Next Story