ಬಿಪಿಎಲ್ ಕಾರ್ಡ್ ಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ಸಚಿವ ಉಮೇಶ್ ಕತ್ತಿ
ಬೆಂಗಳೂರು, ಫೆ. 5: ಬಿಪಿಎಲ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಇದ್ದರೆ ಶೀಘ್ರದಲ್ಲೆ ಸರಿಪಡಿಸಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಇಂದಿಲ್ಲಿ ಭರವಸೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಅಪ್ಪಚ್ಚು ರಂಜನ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಗ್ರಾ.ಪಂ.ಚುನಾವಣೆ ಹಿನ್ನೆಲೆಯಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸರ್ವರ್ನಲ್ಲಿ ಸಮಸ್ಯೆ ಇದ್ದರೆ ಫೆ. 15ರ ಒಳಗೆ ಸರಿಪಡಿಸಿ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.
Next Story