ಲಂಚಕ್ಕೆ ಬೇಡಿಕೆ: ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ
ಚಾಮರಾಜನಗರ: ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜೂರಾತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಎಸಿಬಿ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿ. ಹನಿ ನೀರಾವರಿ ಯೋನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ರವರ ಬಳಿ 50 ಸಾವಿರ ರೂ.ಗೆ ಶಿವಲಿಂಗಪ್ಪ ಬೇಡಿಕೆಯಿಟ್ಟಿದ್ದು, ಇದರಿಂದ ಬೇಸತ್ತ ಕಡಬೂರು ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ಎಸಿಬಿಗೆ ಬಂದ ದೂರಿನನ್ವಯ ಡಿವೈಎಸ್ಪಿ ಸದಾನಂದ, ಇನ್ಸ್ ಪೆಕ್ಟರ್ ದೀಪಕ್, ಕಿರಣ್, ಸಿಬ್ಬಂದಿಗಳಾದ ಸತೀಶ್, ಮಹದೇವಸ್ವಾಮಿ, ಕಾರ್ತಿಕ್, ನಾಗೇಂದ್ರ ರವರು ದಾಳಿ ನಡೆಸಿದ್ದಾರೆ.
Next Story