ಮೈಸೂರು : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಕೊಲೆ; ಓರ್ವನಿಗೆ ಗಂಭೀರ ಗಾಯ
ಮೈಸೂರು : ನಗರದ ಎಲೆತೋಟದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಕೊಲೆ ಮಾಡಲಾಗಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕೊಲೆಯಾದವರನ್ನು ಗೌರಿ ಶಂಕರನಗರದ ಕಿರಣ್ (29) ಮತ್ತು ಕಿಶನ್ (29) ಎಂದು ಗುರುತಿಸಲಾಗಿದೆ.
ರವಿವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Next Story