ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಚಂದ್ರಕಾಂತ ಬೆಲ್ಲದ ಆಯ್ಕೆ
ಬೆಂಗಳೂರು, ಫೆ.15: ಹಿರಿಯ ಕನ್ನಡ ಪರ ಹೋರಾಟಗಾರ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರನ್ನು ‘ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಫೆ.15ರಂದು ಕಸಾಪದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಚಂದ್ರಕಾಂತ ಬೆಲ್ಲದ ಅವರು ಗಡಿಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಆಯ್ಕೆ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯರಾದ ಟಿ. ತಿಮ್ಮೇಶ್, ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.
Next Story