ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ
ಬೆಂಗಳೂರು, ಫೆ.23: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
Next Story