ವಿಧಾನಪರಿಷತ್ ಗೆ ಮುನಿರಾಜು ಗೌಡ ಅವಿರೋಧ ಆಯ್ಕೆ
ಬೆಂಗಳೂರು, ಮಾ. 8: ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ನಿಗದಿಯಾಗಿದ್ದ ಉಪಚುನಾವಣೆ ಕಣದಲ್ಲಿ ಬಿಜೆಪಿಯ ಮುನಿರಾಜು ಗೌಡ ಪಿ.ಎಂ. ಅವರು ಮಾತ್ರ ಇದ್ದುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದಾರೆ.
Next Story