ಮಧುಬಂಗಾರಪ್ಪಗೆ ಬುಲಾವ್ ನೀಡಿದ ಸಿದ್ದರಾಮಯ್ಯ
ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ?
ಶಿವಮೊಗ್ಗ: ಜೆಡಿಎಸ್ ನ ಮಾಜಿ ಶಾಸಕ ಮಧುಬಂಗಾರಪ್ಪ ನವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಕುರಿತು ನಾಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಮಧುಬಂಗಾರಪ್ಪನವರಿಗೆ ಬುಲಾವ್ ನೀಡಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Next Story