ಸರಕಾರಿ ಕೇಂದ್ರದಲ್ಲಿ ಉಚಿತವಾಗಿ ಕೊರೋನ ಲಸಿಕೆ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಮಾ.11: ಪ್ರಿಯಾಂಕ್ ಖರ್ಗೆ ಅವರೇ, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಯಾವುದೇ ಅರ್ಹ ಫಲಾನುಭವಿಗಳು, ಮೊದಲನೇ ಡೋಸ್ ಅಥವಾ ಎರಡನೇ ಡೋಸ್ ಯಾವುದೇ ಆಗಿದ್ದರೂ ಸರಕಾರಿ ಕೇಂದ್ರಗಳಲ್ಲಿ ಕೊರೋನ ಲಸಿಕೆಯನ್ನು ಉಚಿತವಾಗಿ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೊರೋನ ಲಸಿಕೆ ವಿತರಣೆ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ ಬಿಟ್ಟುಹೋದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಸರಕಾರಿ ಕೇಂದ್ರಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ನಿಗದಿತ ಬೆಲೆಗೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Next Story