ಶಾಸಕಿ ಸೌಮ್ಯಾ ರೆಡ್ಡಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು, ಮಾ. 27: ‘ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.
‘ಕೋವಿಡ್ ಪಾಸಿಟಿವ್ ಆಗಿರುವ ಕಾರಣ, ಮುಂಜಾಗೃತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು' ಎಂದು ಅವರು ಕೋರಿದ್ದಾರೆ.
ಶನಿವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ‘ಕೋವಿಡ್-19 ಸೋಂಕಿನ ಎರಡನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕು' ಎಂದು ಇದೇ ಸಂದರ್ಭದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
Next Story