ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ
ಮಂಡ್ಯ, ಎ.1: ಸಾಲಬಾಧೆ ತಾಳದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ.
ಸುನಿಲ್(23) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೃಷಿ ಚಟುವಟಿಕೆಗಾಗಿ ಸುಮಾರು ಹತ್ತು ಲಕ್ಷ ರೂ. ಸಾಲ ಮಾಡಿದ್ದರು. ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story