ಯುಗಾದಿಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ' ಎಂದು ಶುಭಾಶಯ ಕೋರಿದ್ದಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
Next Story