ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಶಾಸಕ ಆನಂದ ಮಾಮನಿಗೆ ಕೊರೋನ ಪಾಸಿಟಿವ್
ಬೆಳಗಾವಿ, ಎ.16: ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಆನಂದ ಮಾಮನಿ ಅವರಿಗೆ ಶುಕ್ರವಾರ ಕೊರೋನ ಸೋಂಕು ಪಾಸಿಟಿವ್ ಬಂದಿದೆ.
ಈ ಬಗ್ಗೆ ಆನಂದ ಮಾಮನಿ ಅವರು ಫೇಸ್ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 'ಇಂದು ಬೆಳಗ್ಗೆ ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿ ಪಾಸಿಟಿವ್ ಎಂದು ದೃಢಪಟ್ಟಿದೆ. ವೈದ್ಯರು 17 ದಿನ ಹೋಮ್ ಐಸೋಲೇಷನಲ್ಲಿರಲು ತಿಳಿಸಿರುತ್ತಾರೆ' ಎಂದು ಬರೆದಿದ್ದಾರೆ.
ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿ ತಮ್ಮ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ. ಆದಷ್ಟು ಬೇಗ ಗುಣಮುಖನಾಗಿ ಎಂದಿನಂತೆ ತಮ್ಮ ಸೇವೆಯಲ್ಲಿ ಕಾರ್ಯಪ್ರವೃತ್ತನಾಗುತ್ತೇನೆ ಎಂದು ತಿಳಿಸಿದ್ದಾರೆ.
ಆನಂದ ಮಾಮನಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಉಪಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Next Story