ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಸಿಬ್ಬಂದಿ ಕೋವಿಡ್ಗೆ ಬಲಿ: ಹಲವರಿಗೆ ಸೋಂಕು ದೃಢ
ಬೆಂಗಳೂರು, ಎ.17: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಲೆಕ್ಕಾಧಿಕಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಲೆಕ್ಕಾಧಿಕಾರಿಗೆ ಇತ್ತೀಚಿಗೆ ಕೊರೋನ ಗುಣಲಕ್ಷಣಗಳು ಕಾಣಿಸಿಕೊಂಡಿದ್ದವು. ಆಸ್ಪತ್ರೆಗೆ ಹೋಗಿ ತಪಾಸಣೆ ನಡೆಸಿದಾಗ ಕೋವಿಡ್ ದೃಢವಾಗಿತ್ತು. ಕ್ವಾರಂಟೈನ್ನಲ್ಲಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿಬ್ಬಂದಿ ಮೃತಪಟ್ಟ ಬೆನ್ನಲ್ಲೇ 6ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದ್ದು, ಆತಂಕ ಮನೆ ಮಾಡಿದೆ.
Next Story