ಕೊರೋನ ಎರಡನೆ ಅಲೆ: ವಿಧಾನಸೌಧ, ವಿಕಾಸಸೌಧ, ಎಂ.ಎಸ್.ಬಿಲ್ಡಿಂಗ್ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ
ಬೆಂಗಳೂರು, ಎ. 17: ಕೋವಿಡ್ ಎರಡನೆ ಅಲೆ ಹಿನ್ನೆಲೆಯಲ್ಲಿ ಸಚಿವರುಗಳ ಕಚೇರಿ ಸಿಬ್ಬಂದಿ, ಸಚಿವಾಲಯದ ಅಧಿಕಾರಿ/ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಬಿಲ್ಡಿಂಗ್ ಕಟ್ಟಡಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡುವ ಸಾರ್ವಜನಿಕರು ಪೂರ್ವಾನುಮತಿ ಪತ್ರದೊಂದಿಗೆ ಮಧ್ಯಾಹ್ನ 3:30ರ ನಂತರವಷ್ಟೇ ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಬಿಲ್ಡಿಂಗ್ ಕಟ್ಟಡಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಇಲಾಖೆಯಲ್ಲಿನ ಕಡತ ವ್ಯವಹಾರ ಪರಿಶೀಲನೆ ಕಾರಣಕ್ಕೆ ಬರುವ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇಲಾಖೆ ಮಾರ್ಗಸೂಚಿ ಪರಿಶೀಲಿಸಿ ಪ್ರವೇಶಕ್ಕೆ ಅನುವು ಮಾಡಿಕೊಡಬೇಕು. ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಬಿಲ್ಡಿಂಗ್ ಕಟ್ಟಡಗಳ ಪ್ರತಿಯೊಂದು ಮಹಡಿಗಳ ಕಾರಿಡಾರ್ನಲ್ಲಿ ಒಟ್ಟಾಗಿ ಗುಂಪು ಸೇರದಂತೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.
Next Story