ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಂ ಕ್ವಾರಂಟೈನ್ಗೆ ವೈದ್ಯರ ಸಲಹೆ
ಬೆಂಗಳೂರು, ಎ.17: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಮುಂದಿನ ಸೂಚನೆ ಬರುವವರೆಗೂ ಅವರು ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕೊರೋನ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹ ಕಚೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು, ಮುಖಂಡರು ಸಹಕರಿಸಬೇಕೆಂದು ಅನಿತಾ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಿಕೊಂಡು ಕೊರೋನ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
Next Story