ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಕೊರೋನ ಸೋಂಕು ದೃಢ
ಬೆಂಗಳೂರು, ಎ.18: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, 'ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ' ಎಂದು ತಿಳಿಸಿದ್ದಾರೆ.
Next Story