ಶಾಸಕ ಝಮೀರ್ ಅಹ್ಮದ್ ಖಾನ್ಗೆ ಕೊರೋನ ಸೋಂಕು
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ನಲ್ಲಿ ಇದ್ದೇನೆ’ ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ.
— B Z Zameer Ahmed Khan (@BZZameerAhmedK) April 22, 2021
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ. pic.twitter.com/TAx8vL1AvG
Next Story