ರೆಮ್ಡೆಸಿವಿರ್ ಅಕ್ರಮ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಕಲಬುರ್ಗಿ, ಮೇ 3: ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಮಾರಾಟ ಮಾಡುತ್ತಿರುವ ಆರೋಪ ಸಂಬಂಧ ಇಬ್ಬರು ಆರೋಪಿಗಳನ್ನು ಡ್ರಗ್ ಕಂಟ್ರೋಲರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ನಗರದ ನವಜೀವನ್ ರಕ್ತನಿಧಿನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ ಮಠಪತಿ(26) ಹಾಗೂ ಸಾಜಿದ್ ಕೂಡಿ(22) ಎಂಬುವರು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ರೆಮ್ಡೆಸಿವಿರ್ ಅಭಾವದ ಕಾರಣ 22 ಸಾವಿರ ರೂಪಾಯಿಗೆ ಒಂದರಂತೆ ಮಾರಾಟ ಮಾಡಲು ಯತ್ನಿಸುತ್ತಿರುವಾಗ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ರೆಮ್ಡೆಸಿವಿರ್ ಇಂಜೆಕ್ಷನ್ ವಶಪಡಿಸಿಕೊಳ್ಳಲಾಗಿದೆ ಎಂದು ಎಎಸ್ಪಿ ಅಂಶುಕುಮಾರ ತಿಳಿಸಿದ್ದಾರೆ.
Next Story