ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂಪಿ ಚಿನ್ನಪ್ಪ ವಿಧಿವಶ
ಬೆಂಗಳೂರು, ಮೇ 4: ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂಪಿ ಚಿನ್ನಪ್ಪ(80) ಅವರು ಸೋಮವಾರ ವಿಧಿವಶರಾಗಿದ್ದಾರೆ.
1941ರ ಜೂನ್ 1ರಂದು ಜನಿಸಿದ್ದ ಎಂ.ಪಿ.ಚಿನ್ನಪ್ಪ ಅವರು 1968ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದರು. 1983 ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಇವರು ಕೆಲ ಕಾಲ ರಾಜ್ಯ ಹೈಕೋರ್ಟ್ನ ರಿಜಿಸ್ಟ್ರಾರ್(ನ್ಯಾಯಾಂಗ) ಆಗಿ, ರಿಜಿಸ್ಟ್ರಾರ್ ಜನರಲ್ ಆಗಿ ಕೆಲಸ ಮಾಡಿದ್ದರು.
1995ರಲ್ಲಿ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಎಂ.ಪಿ ಚಿನ್ನಪ್ಪ 2013ರಲ್ಲಿ ನಿವೃತ್ತಿ ಹೊಂದಿದ್ದರು. ಕರ್ನಾಟಕ ನ್ಯಾಯಾಂಗ ಅಕಾಡಮಿ ಆಡಳಿತ ಮಂಡಳಿ ಸದಸ್ಯರಾಗಿ, ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಪುತ್ರ ಧ್ಯಾನ್ ಚಿನ್ನಪ್ಪ ಹೈಕೋರ್ಟ್ ನಲ್ಲಿ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story