ಮಡಿಕೇರಿ-ಮೇಕೇರಿ ಸಂಪರ್ಕ ರಸ್ತೆ ಅವ್ಯವಸ್ಥೆ | Vartha Bharati- ವಾರ್ತಾ ಭಾರತಿ

--

ಮಡಿಕೇರಿ-ಮೇಕೇರಿ ಸಂಪರ್ಕ ರಸ್ತೆ ಅವ್ಯವಸ್ಥೆ

ಮಡಿಕೇರಿ,ಮೇ 8 : ಇತ್ತೀಚೆಗಷ್ಟೇ ಕಾಂಕ್ರಿಟೀಕರಣಗೊಂಡಿರುವ ಮಡಿಕೇರಿಯಿಂದ-ಮೇಕೇರಿ ಸಂಪರ್ಕ ಕಲ್ಪಿಸುವ 4 ಕಿ.ಮೀ ದೂರದ ರಾಜ್ಯ ಹೆದ್ದಾರಿ ಸಂಚಾರಕ್ಕೆ ಯೋಗ್ಯವಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. 

2018 ರಲ್ಲಿ ಸಂಭವಿಸಿದ ಪಕೃತಿ ವಿಕೋಪದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಈ ತಿರುವು ರಸ್ತೆಯಲ್ಲಿ ಗುಡ್ಡ ಕುಸಿದು ಕೆಲವು ಭಾಗದಲ್ಲಿ ರಸ್ತೆಗೂ ಹಾನಿಯಾಗಿತ್ತು. ಈ ಹಿನ್ನೆಲೆ ಹಾನಿಗೀಡಾದ ರಸ್ತೆಯ ಆಯ್ದ ಭಾಗಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಂಕ್ರಿಟೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು.

ಮೊದಲ ಹಂತವಾಗಿ 2020 ರ ಆಗಸ್ಟ್ 30 ರಿಂದ 2020 ರ ಅಕ್ಟೋಬರ್ 30 ರವರೆಗೆ ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿ 2 ತಿಂಗಳ ಕಾಲ ಕಾಮಗಾರಿ ನಡೆಸಲಾಗಿತ್ತು. ನಂತರ ಬಾಕಿ ಉಳಿದಿದ್ದ ಕಾಮಗಾರಿ ನಡೆಸುವ ಸಲುವಾಗಿ ಎರಡನೇ ಹಂತವಾಗಿ 2021ರ ಫೆ.25 ರಿಂದ ಮಾ.25ರ ವರಗೆ ಒಂದು ತಿಂಗಳ ಕಾಲ ಸಂಪೂರ್ಣ ರಸ್ತೆ ಬಂದ್ ಮಾಡಿ ಕಾಮಗಾರಿ ನಡೆಸಲಾಗಿತ್ತು. ಸಾರ್ವಜನಿಕರಿಗೆ ಬದಲಿ ರಸ್ತೆಯಾಗಿ ಮೇಕೇರಿ-ತಾಳತ್ ಮನೆ ಮೂಲಕ ಮಡಿಕೇರಿಗೆ ತೆರಳಲು ಅನುವು ಮಾಡಿಕೊಡಲಾಗಿತ್ತು.

ಎರಡು ಹಂತದಲ್ಲಿ ಸುಮಾರು 3 ತಿಂಗಳ ಕಾಲ ಪ್ರಮುಖ ರಸ್ತೆಯನ್ನು ಬಂದ್ ಮಾಡಿ ಕಾಂಕ್ರಿಟೀಕರಣಗೊಳಿಸಿದ ಲೋಕೋಪಯೋಗಿ ಇಲಾಖೆ, ಕಾಮಗಾರಿ ಆದ ಬಳಿಕ ಇತ್ತ ಕಡೆ ಗಮನ ಹರಿಸಿದಂತಿಲ್ಲ. 

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ನೂತನವಾಗಿ ಕಾಂಕ್ರಿಟೀಕರಣಗೊಂಡ ರಸ್ತೆ ಕಚ್ಚಾ ಮಣ್ಣು ರಸ್ತೆಯಾಗಿ ಪರಿವರ್ತನೆಗೊಂಡಿದೆ. ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆದಿದ್ದು, ಮಳೆ ನೀರು ಸರಾಗವಾಗಿ ಹರಿಯದೇ ರಸ್ತೆ ತುಂಬಾ ಕೆಸರು ನಿಂತಿದೆ. 

ಮಳೆ ನೀರಿನ ರಭಸಕ್ಕೆ ಕೆಲವು ಕಡೆಯಷ್ಟೇ ಇರುವ ಚರಂಡಿ ತುಂಬಾ ಮಣ್ಣು ನಿಂತು ರಸ್ತೆ ಮೇಲೆ ಮಣ್ಣಿನ ರಾಶಿ ನಿಂತಿದೆ. ಮಳೆಯಿಂದ ಹರಿದು ಬಂದ ಮರಳು ರಸ್ತೆಯ ತಿರುವಿನಲ್ಲಿ ವಾಹನವನ್ನು ಚಾಲಿಸುವಾಗ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. 

ಒಂದೆರಡು ದಿನ ಬಿಸಿಲು ಬಂದರೆ ಸಾಕು ರಸ್ತೆಯ ಮೇಲಿನ ಮಣ್ಣು ಧೂಳಾಗಿ ಪರಿವರ್ತನೆಗೊಂಡು ವಾಹನ ಸವಾರರಿಗೆ ಅನಾನುಕೂಲ ಉಂಟಾಗಿ ಅಲರ್ಜಿ ಮುಂತಾದ ಆರೋಗ್ಯ ಸಮಸ್ಯೆ ಉಂಟಾಗಬಹುದು. ರಸ್ತೆ ಬದಿಗೆ ಮಾರ್ಕಿಂಗ್ ಮಾಡಿದ್ದು ರಸ್ತೆ ಮೇಲೆ ಮಣ್ಣು ನಿಂತ ಪರಿಣಾಮ ರಸ್ತೆ ಬದಿಯ ಮಾರ್ಕ್ ಮರೆಯಾಗಿ ರಸ್ತೆಯನ್ನು ಹುಡುಕಿಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. 

ಸುಮಾರು 3 ತಿಂಗಳ ಕಾಲ ಸಾರ್ವಜನಿಕ ರಸ್ತೆ ಬಂದ್ ಮಾಡಿ ನಡೆಸಿರುವ ಈ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಬಗ್ಗೆ ಸಂಬಂದ ಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಚರಂಡಿ ನಿರ್ಮಿಸಿ, ಮಳೆ ನೀರು ಸರಾಗವಾಗಿ ಚರಂಡಿ ಮೂಲಕ ಹರಿಯುವಂತೆ ಮಾಡಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top