ಮೈಸೂರು: ಆಸ್ಪತ್ರೆಯಲ್ಲೆ ಕೋವಿಡ್ ಸೋಂಕಿತ ಆತ್ಮಹತ್ಯೆ
ಮೈಸೂರು,ಮೇ.9: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತನೊಬ್ಬ ಆಕ್ಸಿಜನ್ ಒದಗಿಸುವ ಪೈಪ್ನಿಂದಲೇ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉದಯಗಿರಿ ನಿವಾಸಿ ದೇವರಾಜ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಗರದ ಟ್ರಾಮಾ ಕೇರ್ ಸೆಂಟರ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಈ ಸಂಬಂಧ ಮೇಟಗಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story