ಮಾರಕಾಸ್ತ್ರಗಳಿಂದ ದಾಳಿ ಮಾಡಿ, ತಲೆ ಮೇಲೆ ಕಲ್ಲು ಎತ್ತು ಹಾಕಿ ಯುವಕನ ಕೊಲೆ
ಮಂಡ್ಯ, ಮೇ11: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಗೆಜ್ಜಲಗೆರೆ ಗ್ರಾಮದ ಹೇಮಂತ್(25) ಕೊಲೆಯಾದ ಯುವಕ. ಈತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆಮಾಡಲಾಗಿದೆ.
ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story