ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 11 ಮಂದಿ ಮೃತ್ಯು
ಚಾಮರಾಜನಗರ : ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಶನಿವಾರ ಬೆಳಗ್ಗೆ 9 ಗಂಟೆಯಿಂದ ರವಿವಾರ ಬೆಳಗ್ಗೆ 9 ಗಂಟೆಯ ತನಕ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 11 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 6 ಮಂದಿ, ಕೊಳ್ಳೇಗಾಲ ತಾಲ್ಲೂಕಿನ 2 ಮಂದಿ, ಯಳಂದೂರು ತಾಲ್ಲೂಕಿನಲ್ಲಿ ಒಬ್ಬರು, ಹನೂರು ತಾಲ್ಲೂಕಿನ ಇಬ್ಬರು ಸಾವನ್ನಪ್ಪಿ ದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.
Next Story