ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರಿಗೂ ಲಸಿಕೆ ಸೌಲಭ್ಯ: ಸಚಿವೆ ಶಶಿಕಲಾ ಜೊಲ್ಲೆ ಭರವಸೆ
ಶಶಿಕಲಾ ಜೊಲ್ಲೆ
ಬೆಂಗಳೂರು ಮೇ 17: ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೋನ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
Next Story