ಲಾರಿ-ಬೈಕ್ ಢಿಕ್ಕಿ : ಸ್ಥಳದಲ್ಲೇ ಇಬ್ಬರು ಯುವಕರು ಮೃತ್ಯು
ಯಾದಗಿರಿ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಗುಂಡಗುರ್ತಿ ಮಾರ್ಗದಲ್ಲಿ ರಾತ್ರಿ ನಡೆದಿದೆ.
ಬಾಲಾಜಿ ಸೇಮುಸಪ್ಪ(25) ಹಾಗೂ ದೇವು ಚಂದ್ರಮು (23) ಮೃತರು ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಗುಂಡಗುರ್ತಿಯಿಂದ ಅನವಾರ ಗ್ರಾಮಕ್ಕೆ ತೆರಳುತ್ತಿರುವಾಗ ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story