ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ವೀಡಿಯೋ ಸಂವಾದ
ಸಿಎಂ ಬಿಎಸ್ವೈ ಸೇರಿ ಸಚಿವರು ಭಾಗಿ
Photo: Twitter.com/CMofKarnataka
ಬೆಂಗಳೂರು, ಮೇ 18: ಕೋವಿಡ್-19 ಸಾಂಕ್ರಾಮಿಕದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಇಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 10 ರಾಜ್ಯಗಳ ಒಟ್ಟು 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್,ಸರಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Next Story