Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ...

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಸಿಎಂ ಬಿಎಸ್‌ವೈ, ದೇವೆಗೌಡ ಸೇರಿ ಗಣ್ಯರ ಸಂತಾಪ

ವಾರ್ತಾಭಾರತಿವಾರ್ತಾಭಾರತಿ26 May 2021 2:27 PM IST
share
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಸಿಎಂ ಬಿಎಸ್‌ವೈ, ದೇವೆಗೌಡ ಸೇರಿ ಗಣ್ಯರ ಸಂತಾಪ

ಬೆಂಗಳೂರು, ಮೇ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೆಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಡವಾಗಿದೆ

`ಸ್ವಾತಂತ್ರ್ಯ ಹೋರಾಟಗಾರರು, ಪತ್ರಕರ್ತರು, ಶತಾಯುಷಿಗಳಾದ ಎಚ್.ಎಸ್.ದೊರೆಸ್ವಾಮಿಯವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದ ಒಬ್ಬ ಮಹಾನ್ ಸಾಮಾಜಿಕ ಹೋರಾಟಗಾರರನ್ನು ಕಳೆದುಕೊಂಡು ನಮ್ಮ ರಾಜ್ಯ ಇಂದು ಬಡವಾಗಿದೆ'

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ

ಕರ್ನಾಟಕದ ಸಾಕ್ಷಿ ಪ್ರಜ್ಞೆ

ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರದ್ದು ಬಹುಮುಖಿ ವ್ಯಕ್ತಿತ್ವ. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇತ್ತೀಚಿನವರೆಗೂ ಅವರು ಕೈಗೊಂಡ ಜನಪರ ಹೋರಾಟದವರೆಗೂ ಸಾಗಿದ ಅವರ ಸುದೀರ್ಘ  ಬದುಕು ಅಪೂರ್ವವಾದುದು. ಗಾಂಧಿಯವರ ಅನುಯಾಯಿಯಾಗಿ, ಅವರ ಚಿಂತನೆಗಳ ಹಾದಿಯಲ್ಲಿಯೇ ನಡೆದವರು. ನಮ್ಮ ನಡುವೆ ಇದ್ದ ಮಹಾತ್ಮ ಗಾಂಧಿಯವರ ಕೊನೆಯ ಕೊಂಡಿಯಂತಿದ್ದರು. ಕರ್ನಾಟಕ ಏಕೀಕರಣಕ್ಕಾಗಿಯೂ ದುಡಿದ ಅವರು ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿಯಾಗಿ, ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದರು. ಅವರ ನಿಧನದಿಂದಾಗಿ ಅಪ್ರತಿಮ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಹೋರಾಟದ ಪರಂಪರೆ

'ಇಪ್ಪತ್ತನೆ ಶತಮಾನವಿಡೀ ಬದುಕಿ, 21ನೆ ಶತಮಾನದ ಮೊದಲೆರಡು ದಶಕಗಳನ್ನೂ ಕಂಡಿದ್ದ ಹಾರೋಹಳ್ಳಿಯ ಶ್ರೀನಿವಾಸಯ್ಯ ದೊರೆಸ್ವಾಮಿಯವರು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದವರು. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಭೂ ಕಬಳಿಕೆಯ ವಿರುದ್ಧದ ಅವರ ಚಟುವಟಿಕೆಗಳು ದೇಶ ವ್ಯಾಪ್ತಿ ಹಬ್ಬಿತ್ತು. ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು. ನಮ್ಮೆಲ್ಲರ ಆತ್ಮಸಾಕ್ಷಿ, ತಪ್ಪು ಕಂಡಾಗ ಎಚ್ಚರಿಸಿ ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದ ಅವರು, ಇಳಿ ವಯಸ್ಸಿನಲ್ಲಿಯೂ ಕುಗ್ಗದೆ, ಜಗ್ಗದೆ, ಅನ್ಯಾಯ, ಅಕ್ರಮ ಕಂಡಾಯ ಬೀದಿಗಿಳಿಯುತ್ತಿದ್ದ ಅವರು ಎಲ್ಲರಿಗೂ ಮಾದರಿಯಾಗಿದ್ದರು. ಪವಿತ್ರವಾದ ಹೋರಾಟದ ಪರಂಪರೆಯನ್ನು ಕನ್ನಡ ನೆಲದಲ್ಲಿ ಮುನ್ನಡೆಸುತ್ತಾ ಹೋರಾಟವನ್ನು ಯಾವತ್ತೂ ದ್ವೇಷ ಆಗದಂತೆ ಆಚರಿಸಿಕೊಂಡು ಬಂದವರು. ಹೀಗಾಗಿ ಆಡಳಿತಗಾರರ ವಿರುದ್ಧ ಪ್ರತಿಭಟನೆ ಮತ್ತು ಸಲಹೆ ನೀಡುವ ಸಹೃದಯತೆಯನ್ನೂ ಪಾಲಿಸಿಕೊಂಡು ಬಂದವರು. ನಾಡಿನ ವಿವೇಕವನ್ನು ನಿರಂತರವಾಗಿ ತಿದ್ದುತ್ತಾ, ವಿಸ್ತರಿಸುತ್ತಾ ಮಾರ್ಗದರ್ಶಕರಾಗಿದ್ದರು. ಇವರ ಸಾವು ನನಗೆ ಈ ಜೀವಮಾನದ ನೋವು. ಸಾರ್ಥಕ ಜೀವನ ನಡೆಸಿ ಯಾವತ್ತೂ ಅಳಿಸಲಾಗದ ಜನಪರ ಹೆಜ್ಜೆಗುರುತುಗಳನ್ನು ಕನ್ನಡ ಮಣ್ಣಿನಲ್ಲಿ ಬಿತ್ತಿ ಹೋಗಿದ್ದಾರೆ. ಅವರು ಈ ನೆಲದಲ್ಲಿ ಬಿತ್ತಿರುವ ಹೋರಾಟದ ಬೀಜಗಳು, ಮುನ್ನಡೆಸಿಕೊಂಡು ಬಂದ ಹೋರಾಟ ಪರಂಪರೆಯನ್ನು ಈ ನಾಡು ಮುನ್ನಡೆಸುತ್ತದೆ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಶೋಷಿತ ವರ್ಗಗಳ ಧ್ವನಿ

'ನೇರ ನಡೆ, ನುಡಿಯ ದೊರೆಸ್ವಾಮಿ ಅವರು ಹುಟ್ಟು ಹೋರಾಟಗಾರರು. ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ರೈತರು, ಶೋಷಿತ ವರ್ಗದವರ ಧ್ವನಿಯಾಗಿದ್ದವರು. ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ಇವರ ಹೋರಾಟಕ್ಕೆ ಗಾಂಧಿ ಸೇವಾ ಪ್ರಶಸ್ತಿ, ಬಸವ ಪುರಸ್ಕಾರ ಸೇರಿ ಅನೇಕ ಪ್ರಶಸ್ತಿಗಳು ಸಂದಿದ್ದವು. ಇವರ ಅಗಲಿಕೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ'

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಬದುಕಿನ ಆದರ್ಶಕ್ಕೆ ಸ್ಫೂರ್ತಿ

'ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ. ದಣಿವರಿಯದ ಅವರ ಹೋರಾಟದ ಕಿಚ್ಚು ಮತ್ತು ಸಾಮಾಜಿಕ ಬದ್ಧತೆ ಅನನ್ಯ. ಹತ್ತಾರು ಬಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಅದು ನನ್ನ ಭಾಗ್ಯ. ಇತ್ತೀಚೆಗಷ್ಟೇ ಕೊರೋನ ಸೋಂಕಿನಿಂದ ಚೇತರಿಸಿಕೊಂಡಿದ್ದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಸ್ವಾತಂತ್ರ್ಯಪೂರ್ವ, ಸ್ವಾತಂತ್ರ್ಯೋತ್ತರ ನಂತರ ಸೆರೆವಾಸ ಅನುಭವಿಸಿದ್ದ ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ. ಇಂತಹ ಮಹಾನ್ ಚೇತನ ಎರಡು ಶತಮಾನಗಳ ಕಾಲಘಟ್ಟದಲ್ಲಿ ನಮ್ಮೆಲ್ಲರಿಗೂ ಹೋರಾಟದ ಸ್ಪೂರ್ತಿಯ ಸೆಲೆಯಾಗಿ ಮುಂಚೂಣಿಯ ಮಾರ್ಗದರ್ಶಕರಾಗಿದ್ದರು ಎಂಬುದನ್ನು ಅತ್ಯಂತ ವಿನೀತ ಭಾವದಿಂದ ಸ್ಮರಿಸಿಕೊಳ್ಳುತ್ತೇನೆ'

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

'ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನದಿಂದ ನಾಡಿನ ಅತ್ಯಂತ ಹಿರಿಯರಾಗಿ ಸದಾ ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿದ್ದ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತೆ ಆಗಿದೆ'

-ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆ ಸ್ಪೀಕರ್

'ನಿರ್ಭೀತ ನಡೆಯ ದೊರೆಸ್ವಾಮಿ ಅವರು ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯನಂತರ ಭಾರತ ದೇಶದಲ್ಲಿ ಜೀವಂತವಾಗಿದ್ದರು. ಅವರ ಮಾರ್ಗದರ್ಶನಕ್ಕೆ ತನ್ನದೆ ಆದ ತೂಕವಿತ್ತು. ಇಳಿ ವಯಸ್ಸಿನಲ್ಲಿಯೂ ಅವರ ದಣಿವರಿಯದ ಸಾಮಾಜಿಕ ಹೋರಾಟಗಳು, ರೈತರು, ಶೋಷಿತರ ಪರವಾಗಿನ ಅವರ ಧ್ವನಿ, ಸಮ ಸಮಾಜಕ್ಕಾಗಿನ ಅವರ ಪ್ರತಿಪಾದನೆಯ ವೈಖರಿ ಹಾಗೂ ಅದಕ್ಕಿದ್ದ ಸ್ಥೈರ್ಯ ಅಪರೂಪ'

-ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.

— B.S. Yediyurappa (@BSYBJP) May 26, 2021

ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ

ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ. pic.twitter.com/FEWnT8Fdb6

— DK Shivakumar (@DKShivakumar) May 26, 2021

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌
ಮನೆ ಹಿರಿಯನನ್ನು ಕಳೆದುಕೊಂಡ ದು:ಖ ನನ್ನದಾಗಿದೆ.
ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
1/2 pic.twitter.com/g7lXfKpvsR

— Siddaramaiah (@siddaramaiah) May 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X