'ಕೆಎಸ್‌ಆರ್‌ಟಿಸಿ' ಹೆಸರು ಬಳಸಲು ಕರ್ನಾಟಕ ಸ್ವತಂತ್ರ, ಇದಕ್ಕೆ ಕೇರಳದ ಅನುಮತಿ ಬೇಕಾಗಿಲ್ಲ: ಲಕ್ಷ್ಮಣ ಸವದಿ | Vartha Bharati- ವಾರ್ತಾ ಭಾರತಿ

--

'ಕೆಎಸ್‌ಆರ್‌ಟಿಸಿ' ಹೆಸರು ಬಳಸಲು ಕರ್ನಾಟಕ ಸ್ವತಂತ್ರ, ಇದಕ್ಕೆ ಕೇರಳದ ಅನುಮತಿ ಬೇಕಾಗಿಲ್ಲ: ಲಕ್ಷ್ಮಣ ಸವದಿ

ಕೆಎಸ್‌ಆರ್‌ಟಿಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಫೇಸ್ ಬುಕ್ ಪೋಸ್ಟ್ ಮೂಲಕ ಹೇಳಿಕೆ ನೀಡಿರುವ ಸಚಿವರು, ''ಕೆಎಸ್‌ಆರ್‌ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ'' ಎಂದು ತಿಳಿಸಿದ್ದಾರೆ.

''ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ 'ಕೆಎಸ್‌ಆರ್‌ಟಿಸಿ' ಎಂದು ಬಳಸುವಂತಿಲ್ಲವೆಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು. ಯಾಕೆಂದರೆ ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ ಬಂದಿಲ್ಲ'' ಎಂದು ತಿಳಿಸಿದ್ದಾರೆ.

''ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್ಟಿಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿ.4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು''.

''ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲೀ ಇಲ್ಲ ಎಂಬುದನ್ನು ಗಮನಿಸಬೇಕು. ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ / ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ'' ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top